ಎತ್ತಿನಹೊಳೆ ಯೋಜನೆ ಬಗ್ಗೆ ಇಂದು ರೈತರ ಜೊತೆ ಸಚಿವ ರಮೇಶ್ ಜಾರಕಿಹೊಳಿ‌ ಚರ್ಚೆ

 

ಎತ್ತಿನಹೊಳೆ ಯೋಜನೆ ಬಗ್ಗೆ ಇಂದು ರೈತರ ಜೊತೆ ಸಚಿವ ರಮೇಶ್ ಜಾರಕಿಹೊಳಿ‌ ಚರ್ಚೆ

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳ ಮಾಹಿತಿ ಪಡೆಯಲಿದ್ದಾರೆ.

ಎತ್ತಿನಹೊಳೆ ಯೋಜನೆ ಬಗ್ಗೆ ಇಂದು ರೈತರ ಜೊತೆ ಸಚಿವ ರಮೇಶ್ ಜಾರಕಿಹೊಳಿ‌ ಚರ್ಚೆ

ಬೆಂಗಳೂರು: ಬೆಂಗಳೂರು‌ ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತಿತರ ಜಿಲ್ಲೆಗಳ ಕುಡಿಯುವ ನೀರಿನ‌ ಬವಣೆ ಕಡಿಮೆ ಮಾಡಲೆಂದು‌ ಕೈಗೆತ್ತಿಕೊಂಡಿರುವ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು ಈ ಸಂಬಂಧ ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ (Ramesh Jarakiholi) ಅವರು ಇಂದು ಆ ಭಾಗದ ರೈತ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಇಂದಿನಿಂದ ಮೂರು ದಿನ ಜಲಸಂಪನ್ಮೂಲ ಇಲಾಖೆ ಮತ್ತು ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳ ಮಾಹಿತಿ ಪಡೆಯಲಿದ್ದಾರೆ. ನಂತರ ಆ ಯೋಜನಾ ಪ್ರದೇಶಗಳ ಜನಪ್ರತಿನಿಧಿಗಳೊಂದಿಗೂ ಮಹತ್ವದ ಸಭೆ ನಡೆಸಲಿದ್ದಾರೆ.

ವಿಕಾಸ ಸೌಧದ ಕೊಠಡಿ ಸಂಖ್ಯೆ 318ರಲ್ಲಿ ಸಭೆ ಸರ್ಕಾರದ ಕೋವಿಡ್ 19 (Covid 19) ನಿರ್ವಹಣೆಯ ಮಾರ್ಗಸೂಚಿಯಂತೆ ಸಭೆಯನ್ನು ‌ನಡೆಸಲಾಗುತ್ತದೆ. ಸಭೆಯ ಬಳಿಕ ಸಚಿವರಾದ ರಮೇಶ್ ಜಾರಕಿಹೊಳಿ‌ ಮಾಧ್ಯಮಗಳಿಗೆ ಚರ್ಚೆಯ ವಿವರಗಳನ್ನು ನೀಡಲಿದ್ದಾರೆ ಎಂದು ಅವರ ಮಾಧ್ಯಮ ಕಾರ್ಯದರ್ಶಿಯ ಪ್ರಕಟಣೆ ತಿಳಿಸಿದೆ.

Comments