ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

 

ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ ನೀಡಿ ಯುವ ಪರಿವರ್ತಕರೆಂದು ಪ್ರಮಾಣೀಕರಿಸಲಾಗುತ್ತದೆ. ಅರ್ಜಿ ಸಲ್ಲಿಸುವವರು ಪರಸ್ಪರ ಬಾಂಧವ್ಯಾಭಿವೃದ್ದಿಯ ಕೌಶಲ್ಯ, ಉತ್ತಮ ಸಂವಹನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ದೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯ ಜತೆಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರಬೇಕು.

ಯಾವುದೇ ಪದವಿ ಅಥವಾ ಮೇಲ್ಟಟ್ಟ ಶೈಕ್ಷಣೆಕ ಅರ್ಹತೆ ಹಾಗೂ ಕನಿಷ್ಟ ವಯಸ್ಸು 21 ರಿಂದ 35 ವಯಸ್ಸಿನವರಾಗಿರಬೇಕು. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಮಾಹಿತಿಯನ್ನು ಸೆಪ್ಟೆಂಬರ್ 21 ರ ಸಂಜೆ 5 ಗಂಟೆಯೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರಕ್ಕೆ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು.

ಅರ್ಹ ಅಭ್ಯಥಿರ್üಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಸಂದರ್ಶನಕ್ಕಾಗಿ ಕರೆಯಲಾಗುವುದು. ಸಂದರ್ಶನದ ದಿನಾಂಕವನ್ನು ಅಭ್ಯಥಿರ್üಗಳಿಗೆ ವೈಯಕ್ತಿಕವಾಗಿ ದೂರವಾಣಿ ಕರೆ ಮೂಲಕ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08152-222340, ಯುವ ಸಮಾಲೋಚಕರಾದ ಚಂದನ.ಎಮ್.ಜಿ ( 9611886172 )ಅಥವಾ ಯುವ ಪರಿರ್ವಕರಾದ ಮುನಿರಾಜು (9663036008) ರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Comments